ಭಾರತದಲ್ಲಿ ಲಾಕ್‌ಡೌನ್ ಮಾಡುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಸ್ಪಷ್ಟನೆ ನೀಡಿದ್ದಾರೆ. ವಿಶ್ವಬ್ಯಾಂಕ್ ಸಮೂಹದ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಜೊತೆಗೆ ನಡೆದ ವರ್ಚ್ಯುಯಲ್ ಸಭೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕೋವಿಡ್ ಹೆಚ್ಚಾಗಿರುವ ಪ್ರಾದೇಶಿಕ ಮಟ್ಟದಲ್ಲಿ ಮಾತ್ರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಲಾಗುತ್ತೆ. ಆದರೆ, ದೊಡ್ಡ ಮಟ್ಟದಲ್ಲಿ ಲಾಕ್‌ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ವೈರಸ್ ಎರಡನೇ ಅಲೆಯಲ್ಲಿ ಅಬ್ಬರಿಸುತ್ತಿದ್ದು, 1,84,372 ಕೇಸ್‌ಗಳು ದಿನಕ್ಕೆ ಪತ್ತೆಯಾಗುತ್ತಿವೆ. ಹೀಗಾಗಿ ದೇಶದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತೆ ಎಂದು ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಇಂದು ಹಣಕಾಸು ಸಚಿವೆ ನಿರ್ಮಲ ಸೀತರಾಮನ್ ಸ್ಪಷ್ಟನೆ ನೀಡಿದ್ದಾರೆ.