ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರು ನಗರದ ಸದಾಶಿವ ನಗರ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಬಳಿಕ ಮಾತನಾಡಿದ ಶ್ರೀಮತಿ ಮಂಗಳಾ ಅಂಗಡಿ ಅವರು, ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂಬ ವಿಶ್ವಾಸ ಇದೆ ಎಂದರು.

ಕ್ಷೇತ್ರದಾದ್ಯಂತ ಪ್ರಚಾರ ಚೆನ್ನಾಗಿ ಆಗಿದೆ. ಮುಖಂಡರು ಹಾಗೂ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಎಲ್ಲರೂ ಬಂದು ಮತ ಚಲಾಯಿಸಬೇಕು. ಸುರಕ್ಷತಾ ಕ್ರಮಗಳನ್ನು ಕೈಗೊಂಡು ಹಕ್ಕು ಚಲಾಯಿಸಬೇಕು. ಮತಗಟ್ಟೆಯಲ್ಲೂ ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ ಎಂದರು.ಅಲ್ಲದೆ, ನಮ್ಮ ಕುಟುಂಬದವರ ಮೇಲೆ ವಿಶ್ವಾಸ ಇಟ್ಟು ಪಕ್ಷದವರು ಟಿಕೆಟ್ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಪುತ್ರಿಯರಾದ ಡಾ.ಸ್ಫೂರ್ತಿ ಪಾಟೀಲ, ಶ್ರೀಮತಿ ಶ್ರದ್ಧಾ ಶೆಟ್ಟರ್ ಅವರೂ ತಾಯಿಯ ಜೊತೆಗೆ ಆಗಮಿಸಿ ಮತದಾನ ಮಾಡಿದರು.