ದೇಶದಲ್ಲಿ ಕೊರೊನಾ ಆರ್ಭಟ ಮುಂದುವರಿದಿದೆ. ಸತತ 3ನೇ ದಿನವೂ 2 ಲಕ್ಷಕ್ಕಿಂತ ಹೆಚ್ಚು ಕೇಸ್ ಪತ್ತೆಯಾಗಿವೆ. ನಿತ್ಯ ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷದ ಸನಿಹದಲ್ಲಿದೆ. ಕಳೆದ 24 ಗಂಟೆಯಲ್ಲಿ 2,34,692 ಮಂದಿಗೆ ಸೋಂಕು ವಕ್ಕರಿಸಿದೆ. ಕೊರೊನಾ ಪೀಡಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,23,354 ಗುಣಮುಖರಾಗಿದ್ದಾರೆ.

ಸದ್ಯ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 16,79,740. ಮಹಾಮಾರಿ ಕೊರೊನಾಗೆ ಕಳೆದ 24 ಗಂಟೆಯಲ್ಲಿ 1,341 ಜನ ಬಲಿಯಾಗಿದ್ದಾರೆ. 4ನೇ ದಿನವೂ ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈವರೆಗೆ ಕೊರೊನಾಗೆ 1,75,649 ಜನ ಅಸುನೀಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.