ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರಿದಿದ್ದು ಇಂದು 23,558 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು,116 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 12,22,202 ಕ್ಕೇರಿದ್ದು, 1,76,188 ಸಕ್ರಿಯ ಪ್ರಕರಣಗಳಿದೆ. ಸದ್ಯ ರಾಜ್ಯದಲ್ಲಿ ಈವರೆಗೂ 13,762 ಮಂದಿ ಸಾವನ್ನಪ್ಪಿದ್ದಾರೆ.

ಇಂದಿನ ವರದಿಯಲ್ಲಿ ಬೆಂಗಳೂರು ನಗರದಲ್ಲಿ 13,640, ತುಮಕೂರು 1176, ಬಳ್ಳಾರಿಯಲ್ಲಿ 792, ಕಲಬುರಗಿಯಲ್ಲಿ 757, ಬೆಂಗಳೂರು ಗ್ರಾಮಾಂತರದಲ್ಲಿ 544 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.