ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ” ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿರುತ್ತದೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರು ಇತ್ತೀಚಿಗೆ ಉಪಚುನಾವಣೆಯ ಪ್ರಚಾರ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಜಮೀರ್‌ಗೆ ಕಳೆದ ಆಗಸ್ಟ್‌ನಲ್ಲಿಯೂ ಸೋಂಕು ದೃಢಪಟ್ಟಿತ್ತು.