ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಉನ್ನತ ಮಟ್ಟದ ಸಭೆ ಕರೆದಿದ್ದು ಇದಕ್ಕಾಗಿ ಅವರು ತಮ್ಮ ಪಶ್ಚಿಮ ಬಂಗಾಳಕ್ಕೆ ಚುನಾವಣಾ ಪ್ರಚಾರ ಕಾರ್ಯಕ್ರಮ ರದ್ದು ಮಾಡಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನಾಳಿನ ಉನ್ನತ ಮಟ್ಟದ ಸಭೆಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಮಾರ್ಶೆ ನಡೆಸಲಾಗುವುದು ಎಂದಿದ್ದಾರೆ.
Tomorrow, will be chairing high-level meetings to review the prevailing COVID-19 situation. Due to that, I would not be going to West Bengal.
— Narendra Modi (@narendramodi) April 22, 2021
ಸಭೆಯಲ್ಲಿ ಸೋಂಕು ಹರಡುವಿಕೆ ತಡೆಯುವ ಬಗ್ಗೆ ಮೋದಿ ಸಮಾಲೋಚನೆ ನಡೆಸಲಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಸಭೆಯ ಬಳಿಕ ಮತ್ತೆ ದೇಶ ಉದ್ದೇಶಿಸಿ ಮಾತನಾಡುವ ಸಾಧ್ಯತೆಗಳಿದ್ದು, ಸಭೆಯಲ್ಲಿ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರು ಭಾಗಿಯಾಗಿದ್ದಾರೆ.