ಬೆಂಗಳೂರು : ರಾಜ್ಯದಲ್ಲಿ ಡೆಡ್ಲಿ ವೈರಸ್ ಕೊರೊನಾ ಅಬ್ಬರ ಮುಂದುವರಿದ್ದು ಹೊಸ ದಾಖಲೆ ಸೃಷ್ಟಿಸಿದೆ. ಇಂದು ರಾಜ್ಯದಲ್ಲಿ 25,795 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 123 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲೆ 15, 244 ಮಂದಿಗೆ ವೈರಸ್ ಒಕ್ಕರಿಸಿದ್ದು 68 ಮಂದಿ ಮೃತರಾಗಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು ಜೊತೆಗೆ ಐಸಿಯು ರೋಗಿಗಳ ಸಂಖ್ಯೆ 985ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರು ಹೊರತುಪಡಿಸಿದರೆ ತುಮಕೂರು ಬಳ್ಳಾರಿಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿದೆ. ತುಮಕೂರಿನಲ್ಲಿ 1,231, ಬಳ್ಳಾರಿಯಲ್ಲಿ 940 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನ ಮೈಸೂರು, ಕೋಲಾರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದ್ದು ಸದ್ಯ 19,6236 ಸಕ್ರಿಯ ಪ್ರಕರಣಗಳಿದೆ. ಈವರೆಗೂ ರಾಜ್ಯದಲ್ಲಿ 13,885 ಸಾವನ್ನಪ್ಪಿದ್ದಾರೆ.