ಅಹಮದಾಬಾದ್: ಕೊರೊನಾ ಸೋಂಕಿಗೆ ಪ್ರಧಾನಿ ನರೇಂದ್ರ ಮೋದಿ ಚಿಕ್ಕಮ್ಮ ನರ್ಮದಾ ಬೆನ್ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಅವರು ಕಳೆದ ೧೦ ದಿನಗಳಿಂದ ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿಗೆ ತುತ್ತಾಗಿದ್ದ ನಮ್ಮ ಚಿಕ್ಕಮ್ಮ ನರ್ಮದಾ ಬೆನ್ ಅವರನ್ನು ಕಳೆದ ೧೦ ದಿನಗಳ ಹಿಂದೆಯೇ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದೇವು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಹೇಳಿದ್ದಾರೆ.
ನರ್ಮದಾ ಬೆನ್ ಅವರಿಗೆ 80 ವರ್ಷ ವಯಸ್ಸಾಗಿದ್ದು, ತನ್ನ ಮಕ್ಕಳೊಂದಿಗೆ ಅಹಮದಾಬಾದ್‌ನ ನ್ಯೂ ರಾಣಿಪ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ತಂದೆ ದಾಮೋದರ ದಾಸ್ ಸಹೋದರ ಜಗಜೀವನ್ ದಾಸ್ ಹಲವು ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ ಎಂದು ಪ್ರಹ್ಲಾದ್ ಮೋದಿ ಹೇಳಿದ್ದಾರೆ.