ಕರ್ನಾಟಕ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬೆಳಗಾವಿಯಲ್ಲಿ 27 ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಬೆಳಗಾವಿಯಲ್ಲಿ BJP ಅಭ್ಯರ್ಥಿ ಮಂಗಳಾ ಅಂಗಡಿ 141099 ಮತಗಳನ್ನು ಪಡೆದು 12361 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರು128738 ಮತಗಳನ್ನು ಪಡೆದುಕೊಂಡಿದ್ರೆ, ಎಂಇಎಸ್ ಅಭ್ಯರ್ಥಿ 37317 ಮತ ಪಡೆದುಕೊಂಡಿದ್ದಾರೆ.

ಅತ್ತ, ಮಸ್ಕಿಯಲ್ಲಿ 11ನೇ ಸುತ್ತಿನ ಮತ ಏಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ ಮುನ್ನಡೆ ಕಾಯ್ದುಕೊಂಡು ಗೆಲುವಿನ ಸನಿಹದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ 32,940 ಮತಗಳನ್ನು ಪಡೆದು 11,035 ಮತಗಳ ಮುನ್ನಡೆಯಲ್ಲಿದ್ದಾರೆ. ಬಿಜೆಪಿಯ ಪ್ರತಾಪ ಗೌಡ ಪಾಟೀಲ್ 21,905 ಮತ ಪಡೆದು ಹಿನ್ನಡೆಯಲ್ಲಿದ್ದಾರೆ.

ಇನ್ನು, ಬಸವಕಲ್ಯಾಣ ಉಪ ಚುನಾವಣೆಯಲ್ಲಿ 14ನೇಯ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶರಣು ಸಲಗಾರ 32790 ಮತ ಪಡೆದು 8223 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 24567, ಜೆಡಿಎಸ್ ಅಭ್ಯರ್ಥಿ 9253 ಹಾಗೂ ಬಂಡಾಯ ಅಭ್ಯರ್ಥಿ 5972 ಮತಗಳನ್ನು ಪಡೆದುಕೊಂಡಿದ್ದಾರೆ.
ಕರ್ನಾಟಕ ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ ಎಂಟರಿಂದ ನಡೆಯುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಸ್ಪರ್ಧಿಸಿದರೆ, ಬಿಜೆಪಿಯಿಂದ ಮಂಗಳಾ ಸುರೇಶ್ ಅಂಗಡಿ ಕಣಕ್ಕಿಳಿದಿದ್ದಾರೆ. ಮಸ್ಕಿಯಲ್ಲಿ ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್, ಕಾಂಗ್ರೆಸ್‌ನಿಂದ ಬಸನಗೌಡ ತುರುವಿಹಾಳ, ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ ಮತ್ತು ಕಾಂಗ್ರೆಸ್‌ನಿಂದ ಮಾಲಾ ಬಿ ನಾರಾಯಣ ರಾವ್ ಕಣದಲ್ಲಿದ್ದಾರೆ.