ಮಸ್ಕಿ : ಅಧಿಕೃತ ಚುನಾವಣಾ ಫಲಿತಾಂಶಕ್ಕೂ ಮುನ್ನ ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದಾರೆ.ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
11ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ತುರ್ವಿಹಾಳ 32,940, ಬಿಜೆಪಿಯ ಪ್ರತಾಪ ಗೌಡ ಪಾಟೀಲ್ 21,905 ಮತಗಳನ್ನು ಪಡೆದಿದ್ದಾರೆ ಈ ಮೂಲಕ ಕಾಂಗ್ರೆಸ್ ನ ಬಸನಗೌಡ ತುರ್ವಿಹಾಳ 11,035 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ. ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ.ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ.🙏
— Vijayendra Yeddyurappa (@BYVijayendra) May 2, 2021
ಈ ಹಂತದಲ್ಲಿ ಸೋಲು ಒಪ್ಪಿಕೊಂಡಿರುವ ಪ್ರತಾಪ್ ಗೌಡ ಪಾಟೀಲ್, ಕ್ಷೇತ್ರದಲ್ಲಿ ನಮ್ಮದೇ ಪಕ್ಷದವರಿಂದ ನನ್ನ ವಿರುದ್ಧ ವಿರೋಧಿ ಅಲೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ.
2016 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ ಕೇವಲ 213 ಮತಗಳ ಅಂತರದಿಂದ ಅಂದಿನ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ ವಿರುದ್ಧ ಗೆಲುವು ಸಾಧಿಸಿದ್ದರು. ಆಪರೇಷನ್ ಕಮಲದ ಭಾಗವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ಪ್ರತಾಪ್ ಗೌಡ ಪಾಟೀಲ್ ಸೋಲಿನಿಂದ ಸಿಎಂ ಬಿಎಸ್‌ವೈ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಮುಖಭಂಗವಾಗಿದೆ. ಮಸ್ಕಿ ಚುನಾವಣೆಯ ಜವಬ್ದಾರಿ ಹೊತ್ತಿದ್ದ ಹಿನ್ನಲೆ ಸಾಕಷ್ಟು ಕುತೂಹಲ ಮೂಡಿಸಿತ್ತು ಹಿಂದೆ ಹಲವು ಉಪ ಚುನಾವಣೆಗಳ ಜವಬ್ದಾರಿ ಹೊತ್ತು ಗೆದ್ದಿದರು. ಆದರೆ ಬಿ.ವೈ ವಿಜಯೇಂದ್ರಗೆ ಮಸ್ಕಿ ಜನರು ಮಣೆ ಹಾಕಿಲ್ಲ.