ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಮಧ್ಯಮ ವೇಗಿ ಸಂದೀಪ್ ವಾರಿಯರ್ ಗೆ ಸೋಂಕು
ಮುಂಬೈ : ಕೋಲ್ಕತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆ ಇಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ರದ್ದಾಗಿದೆ.
ಭಾರತೀಯ ಆಟಗಾರರು ಮತ್ತು ಕೆಕೆಆರ್ ತಂಡದ ಸದಸ್ಯರಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಮತ್ತು ಮಧ್ಯಮ ವೇಗಿ ಸಂದೀಪ್ ವಾರಿಯರ್ ಗೆ ಸೋಂಕು ತಗುಲಿರುವುದು ಧೃಡಪಟ್ಟಿರುವ ಹಿನ್ನಲೆ ಪಂದ್ಯವನ್ನು ಮುಂದೂಡಲಾಗಿದೆ ಎಂದು ಬಿಸಿಸಿಐ ಹೇಳಿದೆ.
ಕಳೆದ ನಾಲ್ಕು ದಿನಗಳಲ್ಲಿ ನಡೆದ ಮೂರನೇ ಸುತ್ತಿನ ಪರೀಕ್ಷೆಯ ಬಳಿಕವೂ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಪಾಸಿಟಿವ್ ಇರುವುದು ಧೃಡವಾಗಿದ್ದು, ತಂಡದ ಎಲ್ಲ ಸದಸ್ಯರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.

ಕೊರೊನಾ ಸೋಂಕಿತ ಇಬ್ಬರು ಆಟಗಾರರನ್ನು ತಂಡದಿಂದ ಪ್ರತ್ಯೇಕಿಸಿ ಐಸೂಲೇಟ್ ಮಾಡಲಾಗಿದೆ. ವೈದ್ಯಕೀಯ ತಂಡವು ಇವರಿಬ್ಬರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದು, ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ಸೋಮವಾರ ನಡೆಯಬೇಕಿದ್ದ ಕೆಕೆಆರ್-ಆರ್‌ಸಿಬಿ ಆಟದ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.

ಕಳೆದ 14 ದಿನಗಳಲ್ಲಿ ಕೆಕೆಆರ್ ತಂಡವೂ ದೆಹಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಟವಾಡಿದೆ. ಕಡೆಯ ಆಟ ಆಡಿದ ಆಟಗಾರರನ್ನು ಆಯಾ ಫ್ರಾಂಚೈಸಿಗಳು ಕ್ವಾರಂಟೈನ್ ಆಗಲು ಸೂಚಿಸಿದ್ದು , ಪಂದ್ಯಗಳಲ್ಲಿ ಭಾಗಿಯಾಗಿರುವ ಮ ಅಧಿಕಾರಿಗಳೂ ಸಹ ಈಗ ಕ್ಯಾರೆಂಟೈನ್ ಆಗಬಹುದು ಎಂದು ತಿಳಿಸಲಾಗಿದೆ