ಬೆಂಗಳೂರು : ಅಂತ್ಯ ಸಂಸ್ಕಾರ ವ್ಯವಸ್ಥೆಯಲ್ಲೂ ಪ್ರಚಾರದ ಗೀಳಿಗೆ ಬಿದ್ದ ಬಿಜೆಪಿ ನಾಯಕರ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದು ಸೋಶಿಯಲ್ ಮೀಡಿಯಾಗಳಲ್ಲಿ ಛೀಮಾರಿ ಹಾಕುತ್ತಿದ್ದಾರೆ.
ಕೋವಿಡ್ ನಿಂದ ಮೃತಪಟ್ಟ ರೋಗಿಗಳ ಉಚಿತ ಅಂತ್ಯ ಸಂಸ್ಕಾರಕ್ಕಾಗಿ ಬೆಂಗಳೂರು ಹೊರ ವಲಯದ ಗಿಡ್ಡೇನಹಳ್ಳಿಯಲ್ಲಿ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ. ಈ ಸ್ಮಶಾನಕ್ಕೆ ಹೋಗುವ ದಾರಿಯ ಮಾರ್ಗವನ್ನ ಸೂಚಿಸಲು ಸ್ಥಳೀಯ ಬಿಜೆಪಿ ನಾಯಕರು ಫ್ಲೆಕ್ಸ್ ಅಳವಡಿಸಿದ್ದಾರೆ.
ಫ್ಲೇಕ್ಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿ.ಎಸ್ ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ್, ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಸ್ವಾಮಿ ನಗುತ್ತಿರುವ ಫೋಟೊ ಹಾಕಿ ಪ್ರಚಾರ ಪಡೆದುಕೊಳ್ಳಲು ಪ್ರಯತ್ನಿಸಿದ್ದಾರೆ.
ಅಲ್ಲದೇ ಬಿಡಿಎ ಅಧ್ಯಕ್ಷ ಎಸ್. ಆರ್ ವಿಶ್ವನಾಥ್ ಮಾರ್ಗದರ್ಶನದಲ್ಲಿ ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್ ಮಲ್ಲಯ್ಯ ಉಚಿತ ನೀರು, ಟೀ, ಕಾಫಿ, ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಬರೆದುಕೊಳ್ಳಲಾಗಿದೆ.

ಅಂತ್ಯ ಸಂಸ್ಕಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಈ ಫ್ಲೇಕ್ಸ್ನ ಪೊಟೊ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು, ಇಂದು ಸಂಜೆ ಬಳಿಕ ಕೆಲವೇ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಸ್ಟ್ ವೈರಲ್ ಆಯ್ತು. ಇದನ್ನು ಕಂಡ ಜನರು ಅಂತ್ಯ ಸಂಸ್ಕಾರದ ವಿಚಾರದಲ್ಲೂ ಬಿಜೆಪಿ ನಾಯಕರ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ

ಅಮಾಯಕ ಜನರ ಪ್ರಾಣ ಉಳಿಸಲಾಗದ ಸರ್ಕಾರ ಸಾವಿನಲ್ಲೂ ಪ್ರಚಾರ ಪಡೆದುಕೊಳ್ಳಲು ಹವಣಿಸುತ್ತಿದೆ ಎಂದು ಜನರು ಸೋಶಿಯಲ್ ಮಿಡಿಯಾಗಳಲ್ಲಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಈ ಪೊಟೊ ವೈರಲ್ ಆಗ್ತಿದ್ದಂತೆ ಎಚ್ಚೇತ್ತುಕೊಂಡ ಸ್ಥಳೀಯ ನಾಯಕರು ಫ್ಲೇಕ್ಸ್ ತೆರವು ಮಾಡಿಸಿದ್ದಾರೆ.