ಪ್ರಚಂಡ ಸಂಖ್ಯೆಯಲ್ಲಿ ಗೆದ್ದ ಟಿಎಂಸಿ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಇಂದು ಸರಳವಾಗಿ ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೋಲ್ಕತ್ತಾದಲ್ಲಿರುವ ರಾಜಭವನದಲ್ಲಿ ಕೊರೊನಾ ಹಿನ್ನಲೆ ಸರಳವಾಗಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನಕರ್, ಮಮತಾ ಬ್ಯಾನರ್ಜಿಗೆ ಪ್ರಮಾಣವಚನ ಬೊಧಿಸಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಶಾಂತ್ ಕಿಶೋರ್, ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ ಸೇರಿದಂತೆ ಕೆಲವರಷ್ಟೇ ಉಪಸ್ಥಿತರಿದ್ದರು.

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, ನನ್ನ ಮೊದಲ ಆದ್ಯತೆ ಕೊರೊನಾ ನಿಯಂತ್ರಿಸುವುದು. ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಮೂರು ಗಂಟೆಗೆ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದಿದ್ದಾರೆ. ಎರಡನೇಯದು ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಚಾರ ತಡೆಗಟ್ಟುವುದು. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಗಮನಹರಿಸುತ್ತೇನೆ. ರಾಜ್ಯದಲ್ಲಿ ಹಿಂಸಾಚಾರಕ್ಕೆ ಅವಕಾಶ ನೀಡಿಲ್ಲ. ಇದಕ್ಕಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡುತ್ತೇನೆ ಎಂದ ಹೇಳಿದರು.
Congratulations to Mamata Didi on taking oath as West Bengal’s Chief Minister. @MamataOfficial
— Narendra Modi (@narendramodi) May 5, 2021