ಬೆಂಗಳೂರು: ಕರ್ನಾಟಕದಲ್ಲಿ ಲಾಕ್‍ಡೌನ್ ಘೋಷಣೆಯಾದ ಹಿನ್ನೆಲೆ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣ 14 ದಿನ ಸ್ಥಗಿತಗೊಳ್ಳಲಿದೆ ಎಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಪತ್ರಿಕಾ ಪ್ರಕಟನೆ ಹೊರಡಿಸಿದೆ. ಈ ನಡುವೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಕೊನೆಯಾಗುತ್ತಾ ಅನ್ನೋ ಪ್ರಶ್ನೆಯೊಂದು ಮೂಡಿದೆ.

ದಿನಾಂಕ 10-05-2021ರಿಂದ 24-05-2021ರವರೆಗೆ ಎಲ್ಲಾ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣ ನಿಲ್ಲಿಸಲು ಒಮ್ಮತದಿಂದ ತೀರ್ಮಾನಿಸಲಾಗಿದೆ. ಇಡೀ ಕರ್ನಾಟಕದಲ್ಲಿ ಸರ್ಕಾರ ಲಾಕ್‍ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲಿ (ರೆಸಾರ್ಟ್, ಪ್ರವಾಸಿ ತಾಣ, ಬೆಂಗಳೂರಿನ ಹೊರವಲಯಗಳಲ್ಲಿ) ಶೂಟಿಂಗ್ ಮಾಡಬಾರದು. ಒಂದು ವೇಳೆ ಕದ್ದುಮುಚ್ಚಿ ಚಿತ್ರೀಕರಣ ಮಾಡುತ್ತಿರೋದು ತಿಳಿದು ಬಂದ್ರೆ ಕೋವಿಡ್ ನಿಯಮಗಳ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತೆ ಎಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ಮೇ 24ರ ನಂತ್ರ ಅಂದಿನ ಸ್ಥಿತಿಗತಿಗಳನ್ನ ಅವಲೋಕಿಸಿ ಚಿತ್ರೀಕರಣದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಅಸೋಸಿಯೇಷನ್ ಹೇಳಿದೆ. ಮೇ 10 ರಿಂದ ಯಾವುದೇ ಚಿತ್ರೀಕರಣ ನಡೆಸುವಂತಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಶುಕ್ರವಾರ ಹೇಳಿದ್ದರು.