ಬೆಂಗಳೂರು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು, ಕೊರೊನಾ ಸೋಂಕು ಧೃಡಪಟ್ಟಿದೆ ನಿಮ್ಮನ್ನು ರಕ್ಷಿಸಲು ನಾವು ರಿಸ್ಕ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಲಾಕ್ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಸುರಕ್ಷಿತವಾಗಿದ್ದು ಪೊಲೀಸರ ಕರ್ತವ್ಯ ಪಾಲನೆಗೆ ಸಹಕರಿಸುವಂತೆ ರವಿ ಡಿ. ಚನ್ನಣ್ಣನವರ್ ಮನವಿ ಮಾಡಿದ್ದಾರೆ.
ರವಿ ಡಿ. ಚನ್ನಣ್ಣನವರ್ ಟ್ವಿಟರ್‌ನಲ್ಲಿ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಮಾಜಿ ಸಚಿವ ಎಂ.ಬಿ ಪಾಟೀಲ್ ಸೇರಿದಂತೆ ಅವರ ನೂರಾರು ಸಂಖ್ಯೆಯ ಅಭಿಮಾನಿಗಳು ಶೀಘ್ರ ಗುಣಮುಖವಾಗಿ ಬನ್ನಿ ಎಂದು ಹಾರೈಸುತ್ತಿದ್ದಾರೆ.