ಬೆಂಗಳೂರು: ಕೊರೊನಾ ಎರಡನೇ ಅಲೆಯ ಅಪಾಯದ ಹಿನ್ನೆಲೆ ಜೂನ್ 21 ರಿಂದ ನಡೆಯಬೇಕಿದ್ದ SSLC ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಪರೀಕ್ಷೆಗಳನ್ನು ಮೂಂದುಡಿಕೆ ಮಾಡಿದ್ದು, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದ ನಂತರ ದಿನಾಂಕ ನಿಗಧಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯನ್ನು ಮುಂದುವರೆಸಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಕೊರೊನಾ ಎರಡನೇ ಅಲೆ ಹಿನ್ನಲೆಯಲ್ಲಿ ಈಗಾಗಲೇ ದ್ವೀತಿಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಹ ಮುಂದೂಡಿಕೆ ಮಾಡುವ ಮೂಲಕ ಗೊಂದಲದಲ್ಲಿದ್ದ ವಿದ್ಯಾರ್ಥಿ ಹಾಗೂ ಫೋಷಕರಿಗೆ ಆತಂಕ ದೂರವಾದಂತಾಗಿದೆ.