ಬೆಂಗಳೂರು : ರಾಜ್ಯದಲ್ಲಿ ಎರಡನೇ ಅಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತೀವ್ರವಾಗಿರುವ ಹಿನ್ನಲೆ ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ಮಾಜಿ ಪ್ರಧಾನಿ ದೇವೇಗೌಡ ನಿರ್ಧರಿಸಿದ್ದಾರೆ.
ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ಇಂದು ಪತ್ರದ ಮೂಲಕ ಮನವಿ ಮಾಡಿರುವ ಅವರು, ಕೊರೊನಾ ಮಹಾಮಾರಿಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ಸಮಯದಲ್ಲಿ ಹುಟ್ಟುಹಬ್ಬದ ಆಚರಣೆ ಬೇಡ ಎಂದು ಮನವಿ ಮಾಡಿದ್ದಾರೆ.

ಹಾರ, ತುರಾಯಿ, ಕೇಕ್ ಕತ್ತರಿಸುವುದು, ಸಿಹಿ ಹಂಚುವುದು ಸೇರಿ ಯಾವುದೇ ರೀತಿಯ ಸಂಭ್ರಮಾಚರಣೆಗಳು ಬೇಡ, ಅ ಹಣವನ್ನ ನಿಮ್ಮ ಭಾಗದ ಕೊರೊನಾ ಪೀಡಿತರ ಸಹಾಯಕ್ಕೆ ನೀಡಿ ಎಂದು ಕರೆ ಕೊಟ್ಟಿದ್ದಾರೆ.
ಮೇ 18 ರಂದು ಹೆಚ್.ಡಿ ದೇವಗೌಡರ ಜನ್ಮದಿನವಿದ್ದು ಅವರು 88 ನೇ ಜನ್ಮ ದಿನವನ್ನು ಆಚರಿಸಿಕೊಳ್ಳಲಿದ್ದಾರೆ.