ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ ಆರಂಭವಾಗಿದ್ದು ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,26,098 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
India reports 3,26,098 new #COVID19 cases, 3,53,299 discharges and 3,890 deaths in the last 24 hours, as per Union Health Ministry
— ANI (@ANI) May 15, 2021
Total cases: 2,43,72,907
Total discharges: 2,04,32,898
Death toll: 2,66,207
Active cases: 36,73,802
Total vaccination: 18,04,57,579 pic.twitter.com/qvAExjSPxE
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 3,26,098 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,43,72,907 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೊನಾ ವೈರಸ್ 3,890 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 2,66,207 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,53,299 ಕೊರೊನಾ ಸೊಂಕಿತರು ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಪೈಕಿ 2,04,32,898 ಕೊರೊನಾ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಸದ್ಯ ದೇಶದಲ್ಲಿ 36,73,802 ಸಕ್ರಿಯ ಪ್ರಕರಣಗಳಿವೆ.