ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ಡೌನ್ ನಿಯಮಗಳು ಜಾರಿ ಮಾಡಲಾಗಿದ್ದು, ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆ ತಿಂಗಳ್ಯಾಂತದವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮೇ 24ಕ್ಕೆ ಹಾಲಿ ಲಾಕ್ಡೌನ್ ಅಂತ್ಯವಾಗಲಿದ್ದು ಮೇ 31 ವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲು ಸರ್ಕಾರ ಚಿಂತಿಸಿದೆ. ನಾಳೆ ಈ ಬಗ್ಗೆ ಅಧಿಕೃತ ಆದೇಶ ರಾಜ್ಯ ಸರ್ಕಾರದಿಂದ ಹೊರ ಬರಲಿದೆ ಎಂದು ಹೇಳಲಾಗುತ್ತಿದೆ.
ನಾಳೆ ಈ ಬಗ್ಗೆ ಹಿರಿಯ ಸಚಿವರ ಜೊತೆಗೆ ಬಿಎಸ್‌ವೈ ಚರ್ಚಿಸಲಿದ್ದು ಬೆಳಗ್ಗೆ 11:30ಕ್ಕೆ ವಿಧಾನಸೌಧದಲ್ಲಿ ನಡೆಯಲಿರುವ ಸುದ್ದಿಗೋಷ್ಟಿಯಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಈ ಬಾರಿ ಲಾಕ್ಡೌನ್ ವಿಸ್ತರಣೆ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಗಳಿದೆ. ಈ ಸಂಬಂಧ ಇಂದು ಬಿ.ಎಸ್ ಯಡಿಯೂರಪ್ಪ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸುತ್ತಿದ್ದು ನಾಳೆ ಬಹುತೇಕ ಪ್ಯಾಕೇಜ್ ಘೋಷಣೆಯಾಗುವುದು ಖಚಿತ ಎನ್ನಲಾಗುತ್ತಿದೆ.
ಇಂದು ಜಿಲ್ಲಾಧಿಕಾರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದರು ಸಭೆಯಲ್ಲಿ ಕೊರೊನಾ ಕಂಟ್ರೋಲ್‌ಗೆ ಜಿಲ್ಲಾಡಳಿತ ಕಠಿಣವಾದ ನಿಯಮಗಳು ಜಾರಿ ಮಾಡಬಹುದು ಎಂದು ಸೂಚಿಸಿದ್ದರು. ಈ ಸೂಚನೆ ಬೆನ್ನಲೆ ರಾಜ್ಯ ಸರ್ಕಾರ ಲಾಕ್ಡೌನ್ ವಿಸ್ತರಣೆ ನಿರ್ಧಾರ ತೆಗೆದುಕೊಳ್ಳುತ್ತಿದೆ.