ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಬಾರದ ಹಿನ್ನಲೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಮೇ 24 ರಿಂದ ಜೂನ್ 7 ವರೆಗೂ ಲಾಕ್ಡೌನ್ ವಿಸ್ತರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸಿಎಂ ಬಿಎಸ್‌ವೈ, ಜನರ ಹಿತದೃಷ್ಟಿಯಿಂದ ಲಾಕ್ಡೌನ್ ವಿಸ್ತರಣೆ ಮಾಡಲಾಗುತ್ತಿದ್ದು, ಜನರು ನಿಯಮಗಳನ್ನು ಪಾಲಿಸುವ ಮೂಲಕ ಮುಂದಿನ ದಿನಗಳಲ್ಲೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಲಾಕ್ಡೌನ್ ವಿಸ್ತರಣೆ ಘೋಷಣೆಗೂ ಮುನ್ನ, ಹಿರಿಯ ಅಧಿಕಾರಿಗಳು ಮತ್ತು ಸಚಿವರ ಜೊತೆಗೆ ಸಿಎಂ ಬಿಎಸ್‌ವೈ ಚರ್ಚೆ ನಡೆಸಿದ್ದರು. ಸದ್ಯ ಕರ್ನಾಟಕದಲ್ಲಿ ನಿತ್ಯ ಸರಾಸರಿ ಮೂವತ್ತು ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ಸೋಂಕು ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಿಸುತ್ತಿದೆ. ಈ ಹಿನ್ನಲೆ ಎರಡು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಸಲಹೆ ನೀಡಲಾಗಿತ್ತು.

ಈ ಸಲಹೆಯನ್ನು ಆಧರಿಸಿ ಈಗ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ನಾಳೆ ಅಧಿಕೃತವಾಗಿ ಪರಿಷ್ಕೃತ ಆದೇಶ ಹೊರಡಿಸಲಿದೆ.