ಬೆಂಗಳೂರು : ರಾಜ್ಯದಲ್ಲಿ ಲಾಕ್ಡೌನ್ ಹಿನ್ನಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ₹ 1250 ಕೋಟಿಗೂ ಅಧಿಕ ಮೊತ್ತದ ಪ್ಯಾಕೇಜ್ ಬಿಡುಗಡೆ ಮಾಡಿದ್ದು, ಇದರಲ್ಲಿ ಆಟೋರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ₹ 3,000 ಗಳನ್ನು ನೀಡಲು ನಿರ್ಧರಿಸಲಾಗಿದೆ.
ಈ ಪರಿಹಾರವನ್ನು ಆಟೋ, ಕ್ಯಾಬ್ ಚಾಲಕರಿಗೆ ಆನ್ ಲೈನ್ ಮೂಲಕ ಹಣ ನೇರ ಪಾವತಿ ಮಾಡಲು ಕ್ರಮಕೈಗೊಳ್ಳಲಾಗುದ್ದು ಇದಕ್ಕಾಗಿ ಸೇವಾ ಸಿಂಧು ಆ್ಯಪ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮುಂದಿನ ಒಂದೇರಡು ದಿನಗಳಲ್ಲಿ ಬಹುತೇಕ ಸೋಮವಾರದ ವೇಳೆಗೆ ಇದು ಸಿದ್ದವಾಗಲಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೇರವಾಗಿ ಬ್ಯಾಂಕ್ ಖಾತೆಯ ಮೂಲಕ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಸೇವಾ ಸಿಂಧು ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸಲು, ವಾಹನದ ಡಾಕ್ಯುಮೆಂಟ್ ( ಆರ್.ಸಿ ), ಡ್ರೈವಿಂಗ್ ಲೈಸೆನ್ಸ್, ಇನ್ಶುರೆನ್ಸ್ ಪ್ರತಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪೊಟೊ ಸೇರಿ ಹಲವು ದಾಖಲೆಗಳು ಬೇಕಾಗಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.