ನವದೆಹಲಿ : ಪೂರ್ವ ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ ಅಂತ್ಯವಾಗುತ್ತಿದ್ದಂತೆ ಈಗ ಪಶ್ಚಿಮ ಕರಾವಳಿಯಲ್ಲಿ ಯಾಸ್ ಚಂಡಮಾರುತ ಅಬ್ಬರಿಸಲಿದೆ. ಇಂದು ರಾತ್ರಿ ಪಶ್ಚಿಮ ಬಂಗಾಳಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಸದ್ಯ ಪಶ್ಚಿಮ ಬಂಗಾಳದ ಡಿಘಾ ಕರಾವಳಿಯಿಂದ 670 ಕಿಮೀ ದೂರದಲ್ಲಿರುವ ಯಾಸ್, ಗಂಟೆಗೆ 155 ರಿಂದ 165 ಕಿಮೀ ವೇಗದಲ್ಲಿ ಬಂದು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಪಶ್ಚಿಮ ಕರಾವಳಿ ಪ್ರದೇಶದಲ್ಲಿರುವ ಜನರ ಸ್ಥಳಾಂತರ ಮಾಡಲಾಗುತ್ತಿದೆ
ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಸೇರಿದಂತೆ ಪೂರ್ವ ತಯಾರಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದು, ಒಡಿಶಾ ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ಸಿಎಂಗಳ ಜೊತೆಗೆ ಚರ್ಚಿಸಿದ್ದಾರೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸೇರಿ ಹಲವು ರಕ್ಷಣಾ ತಂಡಗಳ ನಿಯೋಜನೆ ಬಗ್ಗೆ ರಾಜ್ಯಗಳಿಗೆ ಅಮಿತ್ ಶಾ ಮಾಹಿತಿ ನೀಡಿದ್ದಾರೆ.
ಇನ್ನು ಯಾಸ್ ಚಂಡಮಾರುತದಿಂದ ರಾಜ್ಯದ ದಕ್ಷಿಣ ಭಾಗದಲ್ಲಿ ಮಳೆಯಾಗಲಿದ್ದು ತೀವ್ರತೆ ಹೆಚ್ಚಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.