ರಾಂಚಿ: ರಜೆ ನೀಡದಕ್ಕೆ ಬ್ಯಾಂಕ್ ಉದ್ಯೋಗಿ ಆಕ್ಸಿಜನ್ ಸಿಲಿಂಡರ್ ಜೊತೆ ಕೆಲಸಕ್ಕೆ ಹಾಜರಾಗಿರುವ ಘಟನೆ ಜಾರ್ಖಂಡ್ ನ ಬೊಕೊರಾದಲ್ಲಿ ನಡೆದಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಉದ್ಯೋಗಿಯಾಗಿರುವ ಅರವಿಂದ್ ಕುಮಾರ್ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಚಿಕಿತ್ಸೆ ಬಳಿಕ ಕೊರೊನಾ ವರದಿ ನೆಗೆಟಿವ್ ಬಂದ್ರೂ ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ. ಉಸಿರಾಟದ ತೊಂದರೆ ಹಿನ್ನೆಲೆ ಆಕ್ಸಿಜನ್ ಅಳವಡಿಸಲಾಗಿತ್ತು. ಆದ್ರೆ ಹಿರಿಯ ಅಧಿಕಾರಿಗಳು ಕೆಲಸಕ್ಕೆ ಬರುವಂತೆ ಒತ್ತಡ ಹಾಕಿದ್ದಾರೆ. ಹಾಗಾಗಿ ಆಕ್ಸಿಜನ್ ಸಿಲಿಂಡರ್ ಸಹಿತ ಕೆಲಸಕ್ಕೆ ಬಂದಿದ್ದೇನೆ ಎಂದು ಅರವಿಂದ್ ಕುಮಾರ್ ಆರೋಪಿಸಿದ್ದಾರೆ.
ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದೇನೆ. ಕೃತಕ ಉಸಿರಾಟದ ಅವಶ್ಯಕತೆ ಇದೆ ಎಂದೂ ಗೊತ್ತಿದ್ದರೂ ಬ್ಯಾಂಕಿಗೆ ಬರುವಂತೆ ಹೇಳುತ್ತಿದ್ದಾರೆ ಎಂದು ಅರವಿಂದ್ ಆಕ್ರೋಶ ಹೊರ ಹಾಕಿದ್ದಾರೆ.