ನನ್ನ ಬೆಡ್ ಯುವಕರಿಗೆ ನೀಡಿ ಅಂದಿದ್ರು
ಬೆಂಗಳೂರು: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದೊರೆಸ್ವಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ದೊರೆಸ್ವಾಮಿ ಅವರನ್ನ ಬೆಂಗಳೂರಿನ ಜಯದೇವ ಆಸ್ಪತ್ರೆಹಗೆ ದಾಖಲಿಸಲಾಗಿತ್ತು. ಕೊರೊನಾದಿಂದ ಗುಣಮುಖರಾದ ಬಳಿಕವೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹಾಗಾಗಿ ಕಳೆದ 8 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು.
ನನಗೆ ವಯಸ್ಸಾಗಿದ್ದು, ನನ್ನನ್ನು ಬೆಡ್ ಯುವಕರಿಗೆ ನೀಡಿ. ನಾನು ಆಸ್ಪತ್ರೆಗೆ ದಾಖಲಾಗಲ್ಲ ಎಂದು ದೊರೆಸ್ವಾಮಿ ಹೇಳಿದ್ದರು. ಆದ್ರೆ ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ.ಮಂಜುನಾಥ್ ಮನವೊಲಿಸಿ ದೊರೆಸ್ವಾಮಿ ಅವರನ್ನ ಆಸ್ಪತ್ರೆಗೆ ಕರೆತಂದಿದ್ದರು. ವಯೋಸಹಜ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದಲೂ ದೊರೆಸ್ವಾಮಿ ಅವರು ಬಳಲುತ್ತಿದ್ದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ.
— B.S. Yediyurappa (@BSYBJP) May 26, 2021
ಬಿಎಸ್‍ವೈ ಸಂತಾಪ: