ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಸೇವೆ ಶುಲ್ಕ ಹೇಚ್ಚಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ , ಖಾಸಗಿ ಆಸ್ಪತ್ರೆಗಳು ನೀಡುವ ಲಸಿಕೆಗೆ ಸೇವಾ ಶುಲ್ಕವನ್ನು ರೂ.100 ರಿಂದ 200ಕ್ಕೆ ಹೆಚ್ಚಿಸಿರುವ ರಾಜ್ಯದ ಬಿಜೆಪಿ ಸರ್ಕಾರ ಯಾರ ಹಿತರಕ್ಷಣೆ ಮಾಡುತ್ತಿದೆ? ರಾಜ್ಯದ ಜನರದ್ದೋ? ಖಾಸಗಿ ಆಸ್ಪತ್ರೆಗಳದ್ದೋ? ಎಂದು ಪ್ರಶ್ನಿಸಿದ್ದಾರೆ.
ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು ನೀಡುವ ಲಸಿಕೆಗೆ ರೂ.100 ಸೇವಾ ಶುಲ್ಕವನ್ನು ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದಾರೆನ್ನುವ ದೂರುಗಳಿವೆ. ಹೀಗಿರುವಾಗಲೇ ಸರ್ಕಾರ ಸೇವಾ ಶುಲ್ಕವನ್ನು ದುಪ್ಪಟ್ಟುಗೊಳಿಸಿ ಸುಲಿಗೆಯನ್ನು ಬೆಂಬಲಿಸಿದೆ.
.@BJP4Karnataka govt has increased the service charge from ₹100 to ₹200 to get vaccinated. Whose interests are the @BJP4Karnataka leaders trying to protect?
— Siddaramaiah (@siddaramaiah) May 28, 2021
People of Karnataka?
Or
The private hospitals?#VaccineForAll pic.twitter.com/kgagErXml0
ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಲಸಿಕೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕಿಲ್ಲ ಎಂದು ಹೈಕೋರ್ಟ್ ಚಾಟಿ ಬೀಸಿದರೂ ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ ಆಸ್ಪತ್ರೆಗಳ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ.
ರಾಜ್ಯದ ಜನತೆಗೆ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಕೊರೊನಾ ಲಸಿಕೆ ಸಿಗುವಂತೆ ಮಾಡಬೇಕಾಗಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರಚಾರಕ್ಕಿಳಿದಿದ್ದಾರೆ. ಇವರು ಸಚಿವರೋ? ಖಾಸಗಿ ಆಸ್ಪತ್ರೆಗಳ ಪ್ರಚಾರಕರೋ?
There was a govt order which had capped service charges for vaccination at ₹100. But @BJP4Karnataka MP @Tejasvi_Surya was selling the vaccine at ₹900.
— Siddaramaiah (@siddaramaiah) May 28, 2021
Will there be any action against the brand ambassador of vasavi hospital Tejasvi Surya?@CMofKarnataka?#VaccineForAll pic.twitter.com/gCTBVuXCVn
ಖಾಸಗಿ ಆಸ್ಪತ್ರೆಗಳು ಲಸಿಕಾ ತಯಾರಿಕ ಸಂಸ್ಥೆ ನಿಗದಿಪಡಿಸಿದ ದರದ ಜೊತೆಗೆ ರೂ.100 ಸೇವಾಶುಲ್ಕ ಮಾತ್ರ ವಸೂಲಿ ಮಾಡಬೇಕೆಂದು ಕೇಂದ್ರ ಸರ್ಕಾರದ ಸುತ್ತೋಲೆ ಇದ್ದರೂ, ಲಸಿಕೆಯನ್ನು 900ರೂ.ಗೆ ಮಾರಾಟ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಯಾಕಿಲ್ಲ ಮುಖ್ಯಮಂತ್ರಿಗಳೇ? ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.