ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ವಿಶೇಷ ಪ್ಯಾಕೇಜ್‌ನ್ನ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಬಾಲ ಸೇವಾ ಯೋಜನೆಯಡಿ ಅನಾಥರಾದ ಮಕ್ಕಳಿಗೆ ಮಾಸಿಕ 3500 ಪರಿಹಾರ ಘೋಷಣೆ ಮಾಡಿದ್ದು, ಅನಾಥ ಮಕ್ಕಳಿಗೆ ನೋಂದಾಯಿತ ಪಾಲನಾ ಕೇಂದ್ರದಲ್ಲಿ ಆಶ್ರಯದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ, ಗುಣಮಟ್ಟದ ಶಿಕ್ಷಣಕ್ಕೆ ವ್ಯವಸ್ಥೆಯನ್ನು ಮಾಡಲಾಗುತ್ತೆ, 10 ನೇ ತರಗತಿ ಪೂರೈಸಿದ ಮಕ್ಕಳಿಗೆ ಲ್ಯಾಪ್‌ಟಾಪ್, ಟ್ಯಾಬ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. 21 ವರ್ಷ ತುಂಬಿದ ಹೆಣ್ಣುಮಕ್ಕಳಿಗೆ ಒಂದು ಲಕ್ಷ ಸಹಾಯಧನ ಘೋಷಿಸಲಾಗಿದೆ.