ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯನ್ನ ಪರೋಕ್ಷವಾಗಿ ಸಮರ್ಥಿಸಿಕೊಂಡು ಬಿಜೆಪಿ ನಾಯಕ ಮುಕುಲ್ ರಾಯ್ ಪುತ್ರ ಫೇಸ್‍ಬುಕ್ ಪೋಸ್ಟ್ ಮಾಡಿದ್ದು, ಚರ್ಚೆಗೆ ಕಾರಣವಾಗಿದೆ.

ನಿನ್ನೆ ರಾತ್ರಿ ಮುಕುಲ್ ರಾಯ್ ಪುತ್ರ ಶುಭ್ರಾಂಶ್ ಮಾಡಿದ ಫೇಸ್‍ಬುಕ್ ಹಲವು ಚರ್ಚೆಗಳಿಗೆ ನಾಂದಿ ಹಾಡಿದೆ. ಜನರಿಂದ ಆಯ್ಕೆಯಾಗಿ ಬಂದ ಸರ್ಕಾರದ ಬಗ್ಗೆ ಆಲೋಚನೆ ಮಾಡುವ ಬದಲು ತಮ್ಮ ಬಗ್ಗೆ ಆಲೋಚನೆ ಮಾಡಿಕೊಳ್ಳಬೇಕು ಎಂದು ಪರೋಕ್ಷವಾಗಿ ದೀದಿ ಪರ ಬ್ಯಾಟ್ ಬೀಸಿದ್ದಾರೆ. ಆದ್ರೆ ಎಲ್ಲಿಯೂ ಯಾರ ಹೆಸರನ್ನ ಶುಭ್ರಾಂಶ್ ಬಳಸಿಲ್ಲ. 2019ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಶುಭ್ರಾಂಶ ಚುನಾವಣೆಯಲ್ಲಿ ಸೋತಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಮುಕುಲ್ ರಾಯ್ ಅವರನ್ನ ಟಿಎಂಸಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿತ್ತು. ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಯ ನೆರಳಿನಂತೆ ಮುಕುಲ್ ರಾಯ್ ಕೆಲಸ ಮಾಡುತ್ತಿದ್ದರು. 1998ರಿಂದಲೂ ಮುಕುಲ್ ರಾಯ್ ಬಂಗಾಳದ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ.