ಬೆಂಗಳೂರು: ಗೂಗಲ್ ಬಳಿಕ ಅಮೆಜಾನ್ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಮೊನ್ನೆ ಗೂಗಲ್ ಕನ್ನಡವನ್ನು ಕೊಳಕು ಭಾಷೆ ಎಂದು ಕ್ಷಮೆ ಕೇಳಿತ್ತು. ಇದೀಗ ಅಮೆಜಾನ್ ಕನ್ನಡ ಬಾವುಟ ಮತ್ತು ಲಾಂಛನವುಳ್ಳ ಮಹಿಳೆಯರ ಉಡುಪನ್ನು ಮಾರಾಟಕ್ಕಿಟ್ಟಿದೆ. ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕøತಿ ಸಚಿವ ಅರವಿಂದ್ ಲಿಂಬಾವಳಿ, ಕನ್ನಡ ಸಾವಿರಾರು ಇತಿಹಾಸವುಳ್ಳ ಭಾಷೆ. ಕನ್ನಡದ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕಾನೂನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಪದೇ ಪದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುವ ಸಾಹಸಕ್ಕೆ ವಿದೇಶಿ ಕಂಪನಿಗಳು ಕೈ ಹಾಕಬಾರದು. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ಇಂತಹ ಕೃತ್ಯಗಳು ಹೆಚ್ಚುತ್ತಿರುವುದನ್ನು ಸಹಿಸಲಾಗುವುದಿಲ್ಲ, ಕೆನಡಾ ದೇಶದ ಅಮೇಜಾನ್ ಕಂಪನಿ ಕನ್ನಡಿಗರ ಕ್ಷಮೆ ಕೇಳಬೇಕು. @amazonca ವಿರುದ್ಧ ತತಕ್ಷಣವೇ ಕಾನೂನು ಕ್ರಮ ಜರುಗಿಸಲಾಗುವುದು. 2/2
— Aravind Limbavali (@ArvindLBJP) June 5, 2021
ಕನ್ನಡ ನೆಲದ ಶ್ರೇಷ್ಠತೆಯ ಅರಿವಿಲ್ಲದ ವಿದೇಶಿ ಸಂಸ್ಥೆಗಳು ಕನ್ನಡದ ಅಸ್ಮಿತೆಗೆ ಅವಮಾನ ಮಾಡುವಂತಹ ಯಾವುದೇ ಕೆಲಸ ಮಾಡಿದರೂ ಅದನ್ನು ನಾನು ಪ್ರಬಲವಾಗಿ ಖಂಡಿಸುತ್ತೇನೆ. ಕನ್ನಡ ನೆಲದ ಭಾವನೆಗೆ ಧಕ್ಕೆ ಮಾಡುವಂತಹ ಯಾವುದೇ ಕ್ರಮಕ್ಕೆ ನನ್ನ ತೀವ್ರ ವಿರೋಧವಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾನು ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯವೆಂದು ಭಾವಿಸಿ ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.