ಬೆಂಗಳೂರು : ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡಿದೆ.
ಈ ಬಗ್ಗೆ ಸಿದ್ದರಾಮಯ್ಯ ಆಪ್ತರು ಮಾಹಿತಿ ನೀಡಿದ್ದು, ಸದ್ಯ ಜ್ವರದ ಲಕ್ಷಣಗಳಿಲ್ಲ, ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆ
ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯಲಿದ್ದು ಸೋಮವಾರ ಡಿಸ್ಚಾರ್ಜ್ ಅಗಲಿದ್ದಾರೆ.