ಬೆಂಗಳೂರು: ಮಾಜಿ ಸಚಿವ ಪ್ರೊ.ಮಮ್ತಾಜ್ ಅಲಿ ಖಾನ್ ಇಂದು ಬೆಂಗಳೂರಿನ ಗಂಗಾನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅಲಿ ಖಾನ್ ಬಳಲುತ್ತಿದ್ದರು.
2008 ರಲ್ಲಿ ಯಡಿಯೂರಪ್ಪ ಅವರ ಸಂಪುಟದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿದ್ದರು. ಲೇಖಕರಾಗಿಯೂ ಅವರು ಗುರುತಿಸಿಕೊಂಡಿದ್ದರು. ನಂತರ ಮಮ್ತಾಜ್ ಅಲಿ ಖಾನ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇಂದು ಮಧ್ಯಾಹ್ನ 1.30ಕ್ಕೆ ಕ್ರಿಯೆ ಬೆಂಗಳೂರಿನ ಖುದ್ದುಸ್ ಸಾಹೇಬ್ ಖಬ್ರಸ್ಥಾನ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮಾಜಿ ಸಚಿವರು, ಆತ್ಮೀಯರೂ ಆಗಿದ ಪ್ರೊ ಮಮ್ತಾಜ್ ಅಲಿ ಖಾನ್ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಸರಳ, ಸಜ್ಜನ ರಾಜಕಾರಣಿಯಾಗಿದ್ದ ಅವರೊಂದಿಗಿನ ಒಡನಾಟದ ನೆನಪುಗಳು ಸದಾ ಹಸಿರಾಗಿದೆ. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— B.S. Yediyurappa (@BSYBJP) June 7, 2021
ಮಮ್ತಾಜ್ ಖಾನ್ ಅಲಿ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ, ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ ಹಾಗೂ ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ. ಮಮ್ತಾಜ್ ಅಲಿ ಖಾನ್ ಅವರಿಗೆ 94 ವರ್ಷ ವಯಸ್ಸಾಗಿತ್ತು.
ರಾಜ್ಯದ ಮಾಜಿ ಸಚಿವರಾಗಿದ್ದ ಡಾ. ಮುಮ್ತಾಜ್ ಅಲಿ ಖಾನ್ ಸಾಹೇಬ್ ಅವರು ನಿಧನರಾಗಿರುವ ವಿಚಾರ ತಿಳಿದು ಬೇಸರವಾಯಿತು.
— Nalinkumar Kateel (@nalinkateel) June 7, 2021
ಅವರ ಕುಟುಂಬದವರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ZI1dzhiHXp