ಬೆಂಗಳೂರು : ಜೂನ್ 14 ರ ಬಳಿಕ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆಗಳಿದ್ದು, ಬಾಕಿ ಜಿಲ್ಲೆಗಳಲ್ಲಿ ಮಿನಿ ಲಾಕ್ಡೌನ್ ಮಾಡಲು ಸಿಎಂ ಬಿ.ಎಸ್ ಯಡಿಯೂರಪ್ಪ ತಿರ್ಮಾನಿಸಿದ್ದಾರೆ.
ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ಸಭೆ ನಡೆಸಿದ್ದು ಈ ವೇಳೆ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡಲು ತಿರ್ಮಾನ ಕೈಗೊಳ್ಳಲಾಗಿದೆ.
ಮೈಸೂರು, ಬೆಳಗಾವಿ, ಶಿವಮೊಗ್ಗ, ವಿಜಯಪುರ, ಹಾಸನ, ದಕ್ಷಿಣ ಕನ್ನಡ, ಮಂಡ್ಯ ಮತ್ತು ಬೆಳಗಾವಿಯಲ್ಲಿ ಲಾಕ್ಡೌನ್ ವಿಸ್ತರಣೆ ಆಗಲಿದೆ. 5-7% ಪಾಸಿಟಿವಿಟಿ ಆಸುಪಾಸಿನಲ್ಲಿರುವ ಜಿಲ್ಲೆಗಳಲ್ಲಿ ಅನ್ಲಾಕ್ ಮಾಡಲು ಸರ್ಕಾರ ಚಿಂತಿಸಿದೆ.
ಈ ಬಗ್ಗೆ ಸಂಜೆ ಸಿ.ಎಂ ಯಡಿಯೂರಪ್ಪ ಸುದ್ದಿಗೋಷ್ಟಿ ನಡೆಸಲಿದ್ದು ಅಧಿಕೃತವಾಗಿ ಹೊಸ ಲಾಕ್ಡೌನ್ ಮತ್ತು ಅನ್ಲಾಕ್ ನಿಯಮಗಳು ಬಗ್ಗೆ ಮಾಹಿತಿ ನೀಡಲಿದ್ದಾರೆ.