ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯುತ್ತಾರೆ
ನವದೆಹಲಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅರುಣ್ ಸಿಂಗ್, ಕೋವಿಡ್ ಸಮಯಲ್ಲಿ ಯಡಿಯೂರಪ್ಪ ಮತ್ತು ಸಚಿವರು ಕರ್ನಾಟಕದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಯಾರೂ ಬಹಿರಂಗವಾಗಿ ಹೇಳಿಕೆ ನೀಡಬಾರದು. ಕರ್ನಾಟಕಕ್ಕೆ ತೆರಳಿದ ಮೇಲೆ ಶಾಸಕಾಂಗ ಸಭೆ ನಡೆಸುವ ಕುರಿತು ತೀರ್ಮಾನಿಸಲಾಗುವುದು. ಪಕ್ಷದಲಿಯೇ ಆಂತರಿಕ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳುವ ಮೂಲಕ ಸಿಎಂ ವಿರೋಧಿ ಬಣಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.

ಹೈಕಮಾಂಡ್ ಕೇಳಿದ್ರೆ ರಾಜೀನಾಮೆ ನೀಡೋದಾಗಿ ಮಾತ್ರ ಹೇಳಿದ್ದಾರೆ. ಬಿಜೆಪಿಯ ಎಲ್ಲ ಮುಖ್ಯಮಂತ್ರಿಗಳು ಮತ್ತು ಕಾರ್ಯಕರ್ತರ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ಸಿಎಂ ಬದಲಾವಣೆಯ ಚರ್ಚೆಗಳು ನಡೆದಿಲ್ಲ ಎಂದು ಎಲ್ಲ ಗೊಂದಲಗಳಿಗೆ ಅರುಣ್ ಸಿಂಗ್ ತೆರೆ ಎಳೆಯಲು ಪ್ರಯತ್ನಿಸಿದರು.