ಬೆಂಗಳೂರು : ಜೂನ್ 14 ರ ಬಳಿಕ ಲಾಕ್ಡೌನ್ ನಿಯಮಗಳು ಮುಂದುವರಿಯುತ್ತಾ ಅಥಾವ ಅಂತ್ಯವಾಗುತ್ತಾ ಅನ್ನೊ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆಗಳಿದೆ. ಇಂದು ಮಹತ್ವದ ಸಭೆಗಳನ್ನು ನಡೆಸಲಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಅನ್ಲಾಕ್ ಬಗ್ಗೆ ಸ್ಪಷ್ಟನೆ ನೀಡಲಿದ್ದಾರೆ.
ಈಗಾಗಲೇ ಹಲವು ಸಚಿವರು ಅನ್ಲಾಕ್ ಬಗ್ಗೆ ಮುನ್ಸೂಚನೆ ನೀಡಿದ್ದು, ದೆಹಲಿ ಮಹಾರಾಷ್ಟ್ರದ ಮಾದರಿಯಲ್ಲಿ ಹಲವು ಹಂತಗಳಲ್ಲಿ ಅನ್ಲಾಕ್ ಮಾಡಲು ಸರ್ಕಾರದ ಚಿಂತಿಸಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅನ್ಲಾಕ್ ಮಾಡುವ ಸಂಬಂಧ ಬೆಳಗ್ಗೆ ಹನ್ನೊಂದು ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಿಲ್ಲಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಇದಾದ ಬಳಿಕ ಹಿರಿಯ ಸಚಿವರ ಸಭೆ ನಡೆಯಲಿದ್ದು ಸಭೆಯಲ್ಲಿ ಅನ್ಲಾಕ್ ಬಗ್ಗೆ ಅಂತಿಮ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿದೆ.
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನಲೆ ಹಲವು ಆರ್ಥಿಕ ಚಟುವಟಿಕೆಗಳಿಗೆ ಷರತ್ತುಬದ್ದ ಅನುಮತಿ ನೀಡುವ ಸಾಧ್ಯತೆ ಇದೆ. ಇನ್ನು ಸೋಂಕಿನ ಪ್ರಮಾಣ 5% ಹೆಚ್ಚಿರುವ ಕಡೆ ನಿಬಂಧನೆಗಳನ್ನು ಮುಂದುವರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಸಂಜೆ ವೇಳಗೆ ಅನ್ಲಾಕ್ ಗೆ ಸಂಬಂಧಿಸಿದಂತೆ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆಗಳಿದೆ.