ಬೆಂಗಳೂರು : ಬ್ರಾಹ್ಮಣ್ಯದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ ಪೋಸ್ಟ್‌ಗಳ ಬಗೆಗಿನ ವಿಚಾರಣೆಗೆ ಹಾಜರಾಗುವಂತೆ ಆ ದಿನಗಳು ಚಿತ್ರದ ಖ್ಯಾತಿಯ ನಟ ಚೇತನ್‌ಗೆ ಬಸವನಗುಡಿ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಿದ್ದಾರೆ.
ನಾಳೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದು ನಾಳೆ ಬೆಳಗ್ಗೆ ವಿಚಾರಣೆಗೆ ಹಾಜರಾಗುತ್ತಿರುವುದಾಗಿ ನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.
Today, I received a notice from the Basavanagudi Police Station, Bengaluru, to appear for inquiry about my social media posts against #Brahminism
— Chetan Kumar / ಚೇತನ್ (@ChetanAhimsa) June 15, 2021
I will go the police station tomorrow morning
Our fight for #equality & #justice in accordance with Constitutional values continues! pic.twitter.com/Tw6HsBFXEO
ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಜೂನ್ 11 ರಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ನೀಡಿದ ದೂರಿನ ಮೇರೆಗೆ ಚೇತನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.