ಬೆಂಗಳೂರು : ಕೊರೋನಾ ಕಾರಣದಿಂದಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳನ್ನು ಪಾಸು ಮಾಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಇಂದು ಸರ್ಕಾರದ ನಿರ್ಧಾರದ ವಿರುದ್ಧ ರಿಪೀಟರ್ಸ್ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಸರ್ಕಾರಕ್ಕೆ ಈ ಶಾಕ್ ಕೊಟ್ಟಿದೆ.
ವಿಚಾರಣೆ ವೇಳೆ ಕೇವಲ ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಮಾತ್ರ ಪಾಸ್ ಮಾಡಿ ರಿಪೀಟರ್ಸ್ಗೆ ಮಾಮೂಲಿ ಪರೀಕ್ಷೆ ಇರುತ್ತದೆ ಎಂದು ಹೇಳಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ, ಅಲ್ಲದೇ ಸದ್ಯ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ತಡೆ ನೀಡಿದೆ
ದ್ವಿತೀಯ ಪಿಯುಸಿ ಪ್ರಶರ್ಸ್ ವಿದ್ಯಾರ್ಥಿಗಳನ್ನು ನೇರ ಪಾಸ್ ಮಾಡಿದ ಬಳಿಕ ರಿಪೀಟರ್ಸ್ ಪರೀಕ್ಷೆ ನಡೆಸಲು ಸರ್ಕಾರ ತಿರ್ಮಾನಿಸಿತ್ತು. ಸರ್ಕಾರದ ಈ ನಡೆಯನ್ನು ಖಂಡಿಸಿ ರಿಪಿಟರ್ಸ್ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು. ತಮ್ಮನ್ನು ಸಾಮಾನ್ಯ ವಿದ್ಯಾರ್ಥಿಗಳಂತೆ ಪಾಸ್ ಮಾಡಲು ಕೋರಿದ್ದಾರೆ.