ಬೆಂಗಳೂರು: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾದ 16 ಜಿಲ್ಲೆಗಳಲ್ಲಿ ಸಿಎಂ ಯಡಿಯೂರಪ್ಪ ಅನ್‍ಲಾಕ್ ಘೋಷಣೆ ಮಾಡಿದ್ದಾರೆ. ಶೇ.5ಕ್ಕಿಂತ ಕಡಿಮೆ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ ಇರೋ ಜಿಲ್ಲೆಗಳು ಅನ್‍ಲಾಕ್ ಆಗಲಿವೆ. ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ 13 ಜಿಲ್ಲೆಗಳಲ್ಲಿ ಕೆಲ ವಿನಾಯ್ತಿಯೊಂದಿಗೆ ಲಾಕ್‍ಡೌನ್ ಮುಂದುವರಿಯಲಿದೆ.
ಆನ್‍ಲಾಕ್ ಜಿಲ್ಲೆಗಳು: ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್

ಲಾಕ್ ಜಿಲ್ಲೆಗಳು; ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ
ಅನ್‍ಲಾಕ್ ಜಿಲ್ಲೆಗಳಲ್ಲಿ ಏನಿರುತ್ತೆ?:
- ಎಲ್ಲ ಅಂಗಡಿಗಳನ್ನು ಬೆಳಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿ
- ಎಸಿ ಹಾಕದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‍ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆಯವರೆಗೆ ಅವಕಾಶ (ಶೇ.50 ಸಾಮರ್ಥ್ಯ)
- ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ
- ಬಸ್ ಮತ್ತು ಮೆಟ್ರೋದಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಪ್ರಯಾಣಕ್ಕೆ ಅವಕಾಶ.
- ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೇ ಅನುಮತಿ
- ಸರ್ಕಾರಿ, ಖಾಸಗಿ ಕಚೇರಿಗಳಿಗೆ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ.
- ಲಾಡ್ಜ್, ರೆಸಾರ್ಟ್, ಜಿಮ್ ಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ.

ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.