ಬೆಂಗಳೂರು: ಲಾಕ್‍ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

ಲಾಕ್‍ಡೌನ್ ನಿಯಮ ಉಲ್ಲಂಘನೆ: ಕೊರೊನಾ ವೈರಸ್ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಲಾಕ್‍ಡೌನ್ ನಿಯಮಗಳ ಪ್ರಕಾರ ಹೋಟೆಲ್ ಗಳಲ್ಲಿ ಕೇವಲ ಪಾರ್ಸೆಲ್ ವ್ಯವಸ್ಥೆಗೆ ಮಾತ್ರ ಅನುಮತಿ ನೀಡಲಾಗಿದೆ. ಆದ್ರೆ ನೃಪತುಂಗ ರಸ್ತೆಯಲ್ಲಿರುವ ರೆಸ್ಟೋರೆಂಟ್ ನಲ್ಲಿ ಗಾಯಕ ವಿಜಯ್ ಪ್ರಕಾಶ್ ಜೊತೆ ಊಟ ಮಾಡಿರುವ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಆರ್‍ಟಿಐ ಕಾರ್ಯಕರ್ತ ವಿಜಯ್ ಡೆನ್ನಿಸ್ ಎಂಬವರು ಹಲಸೂರು ಗೇಟ್ ನಲ್ಲಿ ದೂರು ದಾಖಲಿಸಿರುವ ಬಗ್ಗೆ ತಿಳಿದು ಬಂದಿದೆ. ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕ ವಿಜಯ್ ಪ್ರಕಾಶ್ ವಿರುದ್ಧ ಎನ್‍ಡಿಎಂಸಿ ಹಾಗೂ ಐಪಿಸಿ ಸೆಕ್ಷನ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.