ರಾಮನಗರ: ಕನಕಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಂದು ಬೆಳಗ್ಗೆ ಚನ್ನಪಟ್ಟಣದಿಂದ ತಿಟ್ಟಮಾರನಹಳ್ಳಿಗೆ ಹೋಗುವ ಅಂಡರ್ ಪಾಸ್ ಯುವಕನ ಶವ ಪತ್ತೆಯಾಗಿದೆ.
19 ವರ್ಷದ ಸುಖೇಶ್ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಸುಖೇಶ್ ತಂದೆ ಜಗನ್ನಾಥ್ ಕನಕಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿದ್ದು, ಕನಕಪುರ ತಾಲೂಕಿನ ಹೊನ್ನಿಗನಹಳ್ಳಿಯ ಗ್ರಾಮದ ನಿವಾಸಿ.
ಮೃತ ಸುಖೇಶ್ ಮೈಸೂರಿನ ಜೆಎಸ್‍ಎಸ್ ಕಾಲೇಜಿನಲ್ಲಿ ಎಲ್‍ಎಲ್‍ಬಿ ವ್ಯಾಸಂಗ ಮಾಡುತ್ತಿದ್ದನು. ಸುಖೇಶ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಮತ್ತು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.