ಬೆಂಗಳೂರು : ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ಮೆಟ್ರೊ ಸಂಚಾರ ಪೂರ್ಣ ಪ್ರಮಾಣದಲ್ಲಿ ಪುನಾರಂಭಗೊಂಡಿದ್ದು, ನಾಳೆಯಿಂದ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಸೇವೆ ಲಭ್ಯವಿರಲಿದೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬೆಂಗಳೂರು ಮೆಟ್ರೊ ರೈಲು ನಿಗಮ, ಪ್ರಯಾಣದ ವೇಳೆ ಸ್ಮಾರ್ಟ್ ಕಾರ್ಡ್ ಇಲ್ಲದೇ, ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದು ಎಂದು ತಿಳಿಸಿದೆ.

ಜನದಟ್ಟಣೆಯ ಸಮಯದಲ್ಲಿ 5 ನಿಮಿಷಕ್ಕೊಂದು ಮೆಟ್ರೋ ರೈಲು ಇರಲಿದ್ದು, ಜನದಟ್ಟಣೆ ಇಲ್ಲದ ಸಮಯದಲ್ಲಿ 15 ನಿಮಿಷಗಳ ಅಂತರದಲ್ಲಿ ಇರಲಿದೆ. ಇನ್ನು ವೀಕೆಂಡ್ ಕರ್ಪ್ಯೂ ಹಿನ್ನಲೆ ಶನಿವಾರ ಮತ್ತು ಭಾನುವಾರ ಮೆಟ್ರೋ ರೈಲು ಸಂಚಾರ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.