ಕೋಲಾರ: ಒಂದು ವರ್ಷದ ಪುಟ್ಟ ಕಂದಮನನ್ನು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ನಡೆದಿದೆ.
22 ವರ್ಷದ ಭಾನುಪ್ರಿಯಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಕೌಟುಂಬಿಕ ಕಲಹ ಹಿನ್ನೆಲೆ ಭಾನುಪ್ರಿಯಾ ಈ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಇತ್ತ ಪೊಲೀಸರು ಭಾನುಪ್ರಿಯಾ ಪತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ತಾಯಿ ಮತ್ತು ಮಗುವಿನ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ನೋಡುಗರ ಕಣ್ಣಲ್ಲಿ ನೀರು ತರಿಸುವಂತಿದೆ. ಈ ಸಂಬಂಧ ಕೋಲಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.