ದೆಹಲಿ: ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪರಿಹಾರದ ಮೊತ್ತವನ್ನ ಕೇಂದ್ರ ಸರ್ಕಾರವೇ ನಿರ್ಧರಿಸಬೇಕು ಎಂದು ಸುಪ್ರೀಂಕೋರ್ಟ್ ನ ನ್ಯಾ.ಅಶೋಕ್ ಭೂಷಣ್ ಪೀಠ ಆದೇಶ ನೀಡಿದೆ.
ಪ್ರತಿ ಕುಟುಂಬಕ್ಕೆ ಕನಿಷ್ಠ ಪರಿಹಾರ ಸಿಗುವಂತಹ ವ್ಯವಸ್ಥೆಯನ್ನ ರೂಪಿಸುವಂತೆ ಕೋರ್ಟ್ ಸೂಚಿಸಿದೆ. ಕೋವಿಡ್‍ಗೆ ಸಂಬಂಧಿಸಿದ ಮರಣ ಪ್ರಮಾಣ ಪತ್ರಗಳನ್ನು ವಿತರಿಸಬೇಕು. ವಿತರಣೆ ಪ್ರಕ್ರಿಯೆ ಆರಂಭಗೊಂಡಿದ್ರೆ ವ್ಯವಸ್ಥೆಯಲ್ಲಿ ಸುಧಾರಣೆ ತನ್ನಿ ಎಂದು ಸುಪ್ರೀಂಕೋರ್ಟ್ ಎನ್‍ಡಿಎಂಎಗೆ ನಿರ್ದೇಶನ ನೀಡಿದೆ.

ಅಲ್ಲದೆ ಎನ್‍ಡಿಎಂಗೆ ತರಾಟೆಗೆ ತೆಗೆದುಕೊಂಡ ನ್ಯಾಯಲಯ, ಪರಿಹಾರ ನೀಡುವ ಬಗ್ಗೆ ಎನ್‍ಡಿಎಂಎ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಮಾರ್ಗಸೂಚಿ ರೂಪಿಸುವಲ್ಲಿ ವಿಫಲವಾಗಿದೆ. ಎನ್‍ಡಿಎಂಎ ಆರು ತಿಂಗಳಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾರ್ಗಸೂಚಿ ರೂಪಿಸಬೇಕು. ಪರಿಹಾರದ ಮೊತ್ತ ಸರ್ಕಾರ, ಎನ್‍ಡಿಎಂಗೆ ವಿವೇಚನೆಗೆ ಬಿಟ್ಟದ್ದು ಎಂದು ಸುಪ್ರೀಂಕೋರ್ಟ್ ಚಾಟಿ ಬೀಸಿದೆ.