ಬೆಂಗಳೂರು: ರಾಜ್ಯ ಸರಕಾರ ಮೂರನೇ ಹಂತದ ಆನ್ ಲಾಕ್ ಘೋಷಣೆ ಮಾಡಿದ್ದು, ಕೆಲವು ವಿನಾಯ್ತಿ ನೀಡಿದೆ. ವೀಕೆಂಡ್ ಲಾಕ್ ಗೆ ಸರ್ಕಾರ ರಿಲೀಫ಼್ ನೀಡಿದ್ದು, ನೈಟ್ ಕರ್ಫ಼್ಯೂ ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದೆ.
- ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
- ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
- ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
- ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
- ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
- ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
- ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
- ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
- ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.