ನವದೆಹಲಿ: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಚಿವ ಡಾ.ಕೆ.ಸುಧಾಕರ್ ಭೇಟಿ ಮಾಡಿ ಮನವಿ ಸಲ್ಲಿಸಿದರು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರೊದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡುವಂತೆ ಕೋರಿ ಸಚಿವರು ಮನವಿ ಪತ್ರ ಸಲ್ಲಿಸಿದರು.
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು. ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ಹಂಚಿಕೆ ವಿಸ್ತರಿಸಬೇಕು ಎಂದು ಸಚಿವರು ಮನವಿ ಮಾಡಿದರು.

ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ವಿಜ್ಞಾನಗಳ ಸಂಸ್ಥೆ ಹಾಗೂ ನರ್ಸಿಂಗ್ ಸಂಸ್ಥೆ ಆರಂಭಿಸಬೇಕು ಎಂದು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಜೊತೆಗಿನ ಚರ್ಚೆ ವೇಳೆ ಪ್ರಸ್ತಾವ ಸಲ್ಲಿಸಲಾಯಿತು.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗಿನ ಚರ್ಚೆ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, “ಎತ್ತಿನಹೊಳೆ ಯೋಜನೆಯಿಂದ ಒಂದು ಕೋಟಿಗೂ ಹೆಚ್ಚು ಜನರಿಗೆ ನೆರವಾಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್ಚು ಅನುಕೂಲವಾಗಲಿದೆ. ಆದ್ದರಿಂದ ಈ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡುವುದು ಸೂಕ್ತವಾಗಿದೆ. ಜೊತೆಗೆ ಈ ಮೂರು ಜಿಲ್ಲೆಗಳಲ್ಲಿ ಕೆರೆಗಳ ಹೂಳೆತ್ತಲು ಮಹಾತ್ಮಗಾಂಧಿ ನರೇಗ, ಜಲಶಕ್ತಿ ಹಾಗೂ 15 ನೇ ಹಣಕಾಸು ಆಯೋಗದ ಅನುದಾನವನ್ನು ಒಟ್ಟುಮಾಡಿ ವಿಶೇಷ ಅನುದಾನ ನೀಡಬೇಕು. ಹಾಗೆಯೇ ಆಂಧ್ರಪ್ರದೇಶದಿಂದ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಮಧ್ಯಪ್ರವೇಶಿಸಿ ನೆರವಾಗಬೇಕು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಆಶಯದಂತೆಯೇ 2024 ರ ವೇಳೆಗೆ ಪ್ರತಿ ಹಳ್ಳಿಗೆ ನೀರು ಒದಗಿಸುವುದು ನನ್ನ ದೂರದೃಷ್ಟಿಯೂ ಆಗಿದೆ ಎಂದು ವಿವರಿಸಿದರು.
🔹ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತಲು ನರೇಗಾ, ಜಲ ಜೀವನ್ ಮಿಷನ್ & 15ನೇ ಹಣಕಾಸು ಆಯೋಗದ ಸಂಯೋಜನೆಯೊಂದಿಗೆ ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಲಾಯಿತು.
— Dr Sudhakar K (@mla_sudhakar) July 6, 2021
🔹ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ವಿಸ್ತರಿಸಲು ಸಹಕರಿಸುವಂತೆ ಕೋರಲಾಯಿತು.
2/2 pic.twitter.com/uss3CGjgWp