ಬೆಂಗಳೂರು: ಈಶಾನ್ಯ ಸಾರಿಗೆ ನಿಗಮಕ್ಕೆ ‘ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.
ಸಾರಿಗೆ ನಿಗಮಗಳ ಅಧಿನಿಯಮ 1950 ರ (ಕೇಂದ್ರ ಅಧಿನಿಯಮ 64) ಕಲಂ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) July 7, 2021
ಮರುನಾಮಕರಣಗೊಂಡಿದೆ ಈಶಾನ್ಯ ಸಾರಿಗೆ ನಿಗಮ
ಸಾರಿಗೆ ನಿಗಮಗಳ ಅಧಿನಿಯಮ 1950 ರ (ಕೇಂದ್ರ ಅಧಿನಿಯಮ 64) ಕಲಮ್ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈ ಮರುನಾಮಕರಣ ಮಾಡಲಾಗಿದೆ. pic.twitter.com/NhlJieXTFh
ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಬಳಿಕ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂಬುದು ಸ್ಥಳೀಯರ ಬೇಡಿಕೆಯಾಗಿತ್ತು. ಆದ್ದರಿಂದ ಹೆಸರು ಬದಲಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.