ಬೆಳಗಾವಿ: ಸಿಡಿ ಕೇಸ್ ನಿಂದಾಗಿ ಸಂಪುಟದಿಂದ ಹೊರ ಬಂದಿರುವ ಮಾಜಿ ಸಚಿವ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ತಮ್ಮ ಹೇಳಿಕೆಯಿಂದ ಸರಿದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಚಿಂತನೆ ನಡೆಸಿದ್ದು ನಿಜ. ಆದ್ರೆ ಆಪ್ತರು, ಕ್ಷೇತ್ರದ ಜನತೆ ಮತ್ತು ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ್ದಾರೆ. ಹಾಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದು ತಿಳಿಸಿದರು.

ಸೋದರ ಬಾಲಚಂದ್ರ ಜಾರಕಿಹೊಳಿ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸುವ ಸಮಯ ಬಂದಿಲ್ಲ. ಸುದ್ದಿಗೋಷ್ಠಿ ಕುರಿತು ಬಾಲಚಂದ್ರ ಜಾರಕಿಹೊಳಿ ಜೊತೆ ಮಾತನಾಡುತ್ತೇನೆ. ಇನ್ನೂ ಸಂಸದೆ ಸುಮಲತಾ ಅಂಬರೀಶ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರ ವಿಚಾರದ ಬಗ್ಗೆ ಹೆಚ್ಚಾಗಿ ನನಗೆ ಮಾಹಿತಿ ಇಲ್ಲ. ಆದ್ದರಿಂದ ಆ ವಿಷಯದ ಕುರಿತು ಪ್ರತಿಕ್ರಿಯಿಸಲ್ಲ. ಇನ್ನೂ ಕೆಆರ್‍ಎಸ್ ಆಣೆಕಟ್ಟು ಭದ್ರವಾಗಿದ ಎಂದು ಅಧಿಕಾರಿಗಳಿ ನೀಡಿರುವ ಸ್ಪಷ್ಟನೆಯೇ ಅಂತಿಮ ಎಂದು ಹೇಳಿದರು.