ದಾವಣಗೆರೆ: ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗುವ ವಿಷಯವನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
9 ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸುವ ಉದ್ದೇಶವಿದೆ. ರಾಜ್ಯದಲ್ಲಿ 18 ಹಾಗೂ ಈಗ ಆರಂಭವಾಗುತ್ತಿರುವ ಹೊಸ ನಾಲ್ಕು ಮೆಡಿಕಲ್ ಕಾಲೇಜುಗಳು ಜಿಲ್ಲಾಕೇಂದ್ರಗಳಲ್ಲೇ ಇವೆ. ತಾಲೂಕು ಮಟ್ಟದಲ್ಲಿ ಕಾಲೇಜು ಇಲ್ಲ. ಈ ಬಗ್ಗೆ ಮನವಿ ಬಂದಿದ್ದು, ಪರಿಶೀಲಿಸಲಾಗುವುದು ಎಂದರು.
ದಾವಣಗೆರೆ ನಗರ ಪ್ರದೇಶದಲ್ಲಿ ಮೂರ್ನಾಲ್ಕು ಎಕರೆ ಲಭ್ಯವಿದ್ದರೆ ಜಯದೇವ ಹೃದ್ರೋಗ ಸಂಸ್ಥೆ ನಿರ್ಮಿಸಬಹುದು. ಅದಕ್ಕಾಗಿ ಜಾಗ ನಿಗದಿಪಡಿಸಲು ಕೋರಿದ್ದೇನೆ. 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ರಾಜ್ಯ ಸರ್ಕಾರ ಮೇಲ್ದರ್ಜೆಗೇರಿಸುತ್ತಿದೆ. ಇನ್ನೂ 250 ಕೇಂದ್ರಗಳನ್ನು ಕೇಂದ್ರದ ಅನುದಾನದಲ್ಲಿ ಮೇಲ್ದರ್ಜೆಗೇರಿಸಬೇಕೆಂದು ಕೋರಲಾಗಿದೆ. ರಾಜ್ಯದಲ್ಲಿ 2,500 ಕೇಂದ್ರಗಳಲ್ಲಿ ಐದು ವರ್ಷಗಳಲ್ಲಿ ಎಲ್ಲವನ್ನೂ ಮೇಲ್ದರ್ಜೆಗೇರಿಸುವ ಉದ್ದೇಶವಿದೆ ಎಂದು ಹೇಳಿದರು.
ದಾವಣಗೆರೆ ಪ್ರವಾಸದ ಸಂದರ್ಭದಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ನಿರ್ಮಾಣ ಹಂತದಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ವೈದ್ಯರ, ಶುಶ್ರೂಷಕರ, ನೌಕರರ ವಸತಿ ಗೃಹಗಳ ಕಾಮಗಾರಿಯನ್ನು ಪರಿವೀಕ್ಷಿಸಲಾಯಿತು. ನಂತರ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಾಯಿತು. ಸಂಸದರಾದ ಶ್ರೀ @GMSBJP, ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/bWZrYReXz9
— Dr Sudhakar K (@mla_sudhakar) July 10, 2021
75% ಕೇಂದ್ರ ಸರ್ಕಾರ ಲಸಿಕೆ ನೀಡಲಿದ್ದು, 25% ಅನ್ನು ಖಾಸಗಿ ವಲಯ ಖರೀದಿಸಬಹುದು. ಇದರಲ್ಲಿ ಲಸಿಕೆ ಉತ್ಪಾದಕರಿಗೆ ಸಂಬಂಧಿಸಿದ ಕೆಲ ಸಮಸ್ಯೆಗಳಿವೆ. ಲಸಿಕೆ ನೀತಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. 7-8 ದಿನಗಳಲ್ಲಿ ಪೂರೈಕೆ ಸಮಸ್ಯೆ ಬಗೆಹರಿಯಲಿದೆ ಎಂದು ಮಾಹಿತಿ ನೀಡಿದರು.