ಬೆಂಗಳೂರು : ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಸರ್ಕಾರ ಚಿಂತಿಸಿದ್ದು ಮುಂದಿನ ಕೆಲವು ದಿನಗಳಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿದೆ.
ಈ ಬಗ್ಗೆ ಸಹಕಾರಿ ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದು, ಕೊರೊನಾದಿಂದ 10187 ರೈತರು ಮೃತಪಟ್ಟಿದ್ದಾರೆ. ಮೃತಪಟ್ಟರುವ ರೈತರು ಬ್ಯಾಂಕುಗಳಲ್ಲಿ 79.47 ಕೋಟಿ ಸಾಲ ಮಾಡಿದ್ದು ಈ ಸಾಲು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.
ಮುಂದಿನ 3 – 4 ದಿನಗಳಲ್ಲಿ ಅಪೇಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆ ಸೇರಲಿದ್ದ ಈ ಬಗ್ಗೆ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ