ಬೆಂಗಳೂರು: ಖಾಸಗಿ ವ್ಯಕ್ತಿಗಳಿಂದ ಸಾಲು ಪಡೆದು ಮರಳಿ ನೀಡಲಾಗದೇ ಆತ್ಮಹತ್ಯೆಗೆ ಶರಣಾಗಿರುವ ಕುಟುಂಬಕ್ಕೆ ಪರಿಹಾರ ನೀಡಿ ಎಂದು ರಾಜ್ಯ ಸರ್ಕಾರಕ್ಕೆಮ ಹೈಕೋರ್ಟ್ ಸೂಚನೆ ಣಿಡಿದ .
ಏನಿದು ಪ್ರಕರಣ?:
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟ ವಿಮೆ ಪರಿಹಾರ ವಿತರಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ಹಿಂದಿರುಗಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಆದ್ರೆ ರೈತರಿಗೆ ತಾವು ಸಾಲ ಪಡೆದುಕೊಳ್ಳುವ ವ್ಯಕ್ತಿ ಪರವಾನಿಗೆ ಪಡೆದುಕೊಂಡಿದ್ದಾರೋ ಇಲ್ಲವೋ ಅನ್ನೋ ಮಾಹಿತಿ ಇರಲ್ಲ. ಪರವಾನಿಗೆ ಪಡೆದವರಿಂದ ಸಾಲ ತೆಗೆದುಕೊಂಡವರಿಗೆ ಪರಿಹಾರ ನೀಡಿ, ಮತ್ತೊಬ್ಬರಿಗೆ ನೀಡುವುದು ಅಸಮಾನತೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ದ
ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಪರವಾನಿಗೆ ಪಡೆದ ಖಾಸಗಿ ಲೇವಾದೇವಿಗಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಈ ಕುರಿತು ಜುಲೈ 8ರಂದು ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅರ್ಜಿದಾರರು ಸ್ವತಂತ್ರರಿದ್ದಾರೆ. ಸರ್ಕಾರದ ಈಗ ಹೊರಡಿಸಿರುವ ಅರ್ಹ ರೈತ ಕುಟುಂಬಗಳಿಗೆ ಪರಿಹಾರ ಕಲ್ಪಿಸಬೇಕು. ಅನುಪಾಲನಾ ವರದಿಯಲ್ಲಿ ಸಲ್ಲಿಸುವಂತೆ ಸೂಚಿಸಿ, ಆಗಸ್ಟ್ 13ಕ್ಕೆ ವಿಚಾರಣೆಯನ್ನು ಮುಂದೂಡಿತು.