ಬೆಂಗಳೂರು: ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದಾರೆ.
— BJP Karnataka (@BJP4Karnataka) July 18, 2021
ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ.
1/2#NalinSpeaks
ಸಿಎಂ ಬದಲಾವಣೆ ಸಂಬಂಧಿಸಿದಂತೆ ಆಡಿಯೋ ವೈರಲ್ ಆಗ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ಆಡಿಯೋ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಬೇಕೆಂದು ಸಿಎಂ ಬಿಎಸ್‌ವೈ ಗೆ ಕಟೀಲ್ ಮನವಿ ಮಾಡಿದ್ದಾರೆ.
ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ.
— BJP Karnataka (@BJP4Karnataka) July 18, 2021
ಆದ್ದರಿಂದ ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿದ್ದೇನೆ.
ಶ್ರೀ @nalinkateel
ಬಿಜೆಪಿ ರಾಜ್ಯಾಧ್ಯಕ್ಷರು
2/2#NalinSpeaks