ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್ ಯಡಿಯೂರಪ್ಪ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೌಹಾರ್ದಯುತವಾಗಿ ಭೇಟಿ ಮಾಡಿದರು

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ ಅರುಣ ಸಿಂಗ್ ಬಿಎಸ್‌ವೈ ಆರೋಗ್ಯ ವಿಚಾರಿಸಿದರು.

ಬಿ.ಎಸ್ ಯಡಿಯೂರಪ್ಪ ಮತ್ತು ಉಸ್ತುವಾರಿ ಅರುಣ್ ಸಿಂಗ್ ಭೇಟಿ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು
